ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಲಕ್ಷ್ಮೀಕಾಂತ್ ದೀಕ್ಷಿತ್ ನಿಧನ

Sampriya

ಶನಿವಾರ, 22 ಜೂನ್ 2024 (15:45 IST)
Photo Courtesy X
ನವದೆಹಲಿ: ಅಯೋಧ್ಯೆ ರಾಮಮಂದಿರದ ಶಂಕುಸ್ಥಾಪನೆಯ ನೇತೃತ್ವ ವಹಿಸಿದ್ದ ಗೌರವಾನ್ವಿತ ಪ್ರಧಾನ ಅರ್ಚಕ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಶನಿವಾರ ಬೆಳಗ್ಗೆ ನಿಧನರಾದರು.

86ವರ್ಷದ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಕಳೆದ ಕೆಲ ದಿನಗಳಿಂದ ಅಸ್ವಸ್ಥರಾಗಿದ್ದರು ಎಂದು ಕುಟುಂಬದ ಮೂಲದಿಂದ ತಿಳಿದುಬಂದಿದೆ.  ಮಣಿಕರ್ಣಿಕಾ ಘಾಟ್‌ನಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಅಯೋಧ್ಯೆ ದೇವಸ್ಥಾನದಲ್ಲಿ ಭಗವಾನ್ ರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭದಲ್ಲಿ ದೀಕ್ಷಿತ್ ಮಹತ್ವದ ಪಾತ್ರ ವಹಿಸಿದ್ದಾರೆ.

ವಾರಣಾಸಿಯ ಹಿರಿಯ ವಿದ್ವಾಂಸರಲ್ಲಿ ಒಬ್ಬರೆಂದು ಗುರುತಿಸಲ್ಪಟ್ಟ ದೀಕ್ಷಿತ್ ಮೂಲತಃ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯವರು, ಆದರೂ ಅವರ ಕುಟುಂಬವು ವಾರಣಾಸಿಯಲ್ಲಿ ಹಲವಾರು ತಲೆಮಾರುಗಳಿಂದ ನೆಲೆಸಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೀಕ್ಷಿತ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. 'ಎಕ್ಸ್' ಪೋಸ್ಟ್‌ನಲ್ಲಿ ಆದಿತ್ಯನಾಥ್, "ಕಾಶಿಯ ಮಹಾನ್ ವಿದ್ವಾಂಸ ಮತ್ತು ಶ್ರೀ ರಾಮ ಜನ್ಮಭೂಮಿ ಪ್ರಾಣ ಪ್ರತಿಷ್ಠೆಯ ಪ್ರಧಾನ ಅರ್ಚಕ ಆಚಾರ್ಯ ಶ್ರೀ ಲಕ್ಷ್ಮೀಕಾಂತ್ ದೀಕ್ಷಿತ್ ಅವರ ಅಗಲಿಕೆ ಆಧ್ಯಾತ್ಮಿಕ ಮತ್ತು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ" ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ