ಮಾರ್ಚ್ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಕನಿಷ್ಠ ಕೊರೋನಾ ಕೇಸ್
ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ, ತಮಿಳುನಾಡು, ದೆಹಲಿಯಲ್ಲಿ ಇಂದಿನಿಂದ ಅನ್ ಲಾಕ್ ಪ್ರಕ್ರಿಯೆ ಶುರುವಾಗಿದೆ. ಕೇರಳದಲ್ಲೂ ಇನ್ನೆರಡು ದಿನಗಳಲ್ಲಿ ಲಾಕ್ ಡೌನ್ ಮುಕ್ತಾಯವಾಗಲಿದೆ. ಹೀಗಾಗಿ ಮುಂದಿನ ಎರಡು ದಿನಗಳಲ್ಲಿ ಕೊರೋನಾ ಪ್ರಕರಣದಲ್ಲಿ ಏರಿಕೆಯಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಹೀಗಾಗಿ ಈ ವಾರ ಮಹತ್ವದ್ದಾಗಿದೆ.