ಸಹಕಾರ ಸಂಬಂಧಗಳನ್ನು ಬೆಳೆಸೋಣ : ಮೋದಿ

ಸೋಮವಾರ, 18 ಏಪ್ರಿಲ್ 2022 (13:13 IST)
ಇಸ್ಲಾಮಾಬಾದ್ : ಹೊಸದಾಗಿ ಚುನಾಯಿತರಾಗಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಭಾರತದೊಂದಿಗಿನ ಸಂಬಂಧವನ್ನು ಸುಧಾರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಈ ಬಗ್ಗೆ ಷರೀಫ್ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಶಾಂತಿಯುತ ಹಾಗೂ ಸಹಕಾರಿ ಸಂಬಂಧವನ್ನು ಬೆಳೆಸುವಂತೆ ಕೋರಿದ್ದಾರೆ.

ಶೆಹಬಾಜ್ ಷರೀಫ್ ಕೆಲವು ದಿನಗಳ ಹಿಂದೆ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಭಾರತ ಹಾಗೂ ಪಾಕಿಸ್ತಾನದ ನಡುವಿನ ಶಾಂತಿಯುತ ಬಾಂಧವ್ಯ ಹಾಗೂ ಜಮ್ಮು-ಕಾಶ್ಮೀರದ ಸಂಘರ್ಷ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಕೋರಿದ್ದಾರೆ ಎಂದು ಭಾನುವಾರ ಮೂಲಗಳು ತಿಳಿಸಿವೆ. 

ಶೆಹಬಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿ ಸ್ಥಾನವನ್ನು ಅಲಂಕರಿಸಿದ ಬಳಿಕ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಷರೀಫ್ ಪತ್ರವನ್ನು ಕಳುಹಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ