ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿ : ಆಜಾದ್
ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲೆಂದು ನಾನು ಈಗಲೂ ಬಯಸುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಶ್ರೀನಗರದಲ್ಲಿ ಮಾತನಾಡಿರುವ ಅವರು, ನಾನು ಕಾಂಗ್ರೆಸ್ನಿಂದ ಬೇರ್ಪಟ್ಟಿದ್ದರೂ ಎಂದೂ ಅದರ ಜಾತ್ಯತೀತ ಸಿದ್ಧಾಂತದ ವಿರುದ್ಧ ಇರಲಿಲ್ಲ. ಪಕ್ಷದ ವ್ಯವಸ್ಥೆ ದುರ್ಬಲವಾಗುತ್ತಿದ್ದರಿಂದ ನಾನು ಬೇರ್ಪಟ್ಟೆ ಅಷ್ಟೇ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಬೇಕೆಂದು ನಾನು ಬಯಸುತ್ತೇನೆ. ಅಲ್ಲಿ ಆಮ್ ಆದ್ಮಿ ಪಕ್ಷ ಗೆಲ್ಲಲು ಸಾಧ್ಯವಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ.