ಮದ್ಯದ ದೊರೆ ವಿಜಯ್‌ ಮಲ್ಯಗೆ 4 ತಿಂಗಳು ಜೈಲು: ಸುಪ್ರೀಂ

ಸೋಮವಾರ, 11 ಜುಲೈ 2022 (15:33 IST)
ನವದೆಹಲಿ : ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂಪಾಯಿ ದಂಡ ವಿಧಿಸಿದೆ.
 
2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಬಳಿಕ ಪರಾರಿಯಾಗಿರುವ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದೆ.

ಇದರೊಂದಿಗೆ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಲ್ಯ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಲಾದ 40 ಮಿಲಿಯನ್ ಡಾಲರ್ಗಳನ್ನು ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಈ ಕುರಿತು ನಡೆದ ವಿಚಾರಣೆ ಈ ವೇಳೆ ಹಿರಿಯ ವಕೀಲ ಜೈದೀಪ್ ಗುಪ್ತಾ ಅವರ ವಾದವನ್ನು ಆಲಿಸಿದ ಬಳಿಕ ಮಾರ್ಚ್ 15 ರೊಳಗೆ ಲಿಖಿತ ದಾಖಲೆಗಳನ್ನು ಸಲ್ಲಿಸಲು ಮಲ್ಯ ಅವರನ್ನು ಪ್ರತಿನಿಧಿಸುತ್ತಿದ್ದ ವಕೀಲರಿಗೆ ಸೂಚನೆ ನೀಡಿತ್ತು.

ಹಿಂದೆ 9 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮರುಪಾವತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಗಳನ್ನು ಮಲ್ಯ ಪಾಲಿಸುತ್ತಿಲ್ಲ ಎಂದು ಆರೋಪಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕ್ಗಳ ಒಕ್ಕೂಟವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.

ಅವರು ಆಸ್ತಿಯನ್ನು ಬಹಿರಂಗಪಡಿಸುತ್ತಿಲ್ಲ ಮತ್ತು ನಿರ್ಬಂಧದ ಆದೇಶಗಳನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ ವರ್ಗಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರಿಂದಾಗಿ 2017ರಲ್ಲಿ ಮಲ್ಯರನ್ನು ಅಪರಾಧಿ ಎಂದು ಪರಿಗಣಿಸಲಾಯಿತು. ನಂತರ ಅವರಿಗೆ ನೀಡಬೇಕಾದ ಉದ್ದೇಶಿತ ಶಿಕ್ಷೆಯ ಕುರಿತು ಪಟ್ಟಿ ಮಾಡಲಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ