ಹೊರಬಿತ್ತು ಸಚಿವ ಆಕಾಂಕ್ಷಿಗಳ ಪಟ್ಟಿ!

ಸೋಮವಾರ, 21 ಮಾರ್ಚ್ 2022 (11:41 IST)
ಲಕ್ನೋ : ಈ ಬಾರಿಯ ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್ ಹೊರತುಪಡಿಸಿ ಗೋವಾ, ಮಣಿಪುರ್, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಪ್ರತಿಷ್ಠಿತ ಹಾಗೂ ಸವಾಲಿನ ಕ್ಷೇತ್ರವಾಗಿದ್ದ ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಯಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾದರೂ 269 ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಉತ್ತರ ಪ್ರದೇಶದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿತು.

ಇದೀಗ ಎಲ್ಲವೂ ಅಂದುಕೊಂಡಂತೆ ಅಗುತ್ತಿದ್ದು, ಮಾರ್ಚ್ 25ರಂದು ಯೋಗಿ ಆದಿತ್ಯನಾಥ್ ಅವರು 2ನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ನಡುವೆ ಯೋಗಿ ಆದಿತ್ಯನಾಥ್ ಅವರ ಸಚಿವ ಸಂಪುಟ ಸೇರಲಿರುವ ಕೆಲವು ಆಕಾಂಕ್ಷಿಗಳ ಪಟ್ಟಿ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ. ಈಚೆಗಷ್ಟೇ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಪಂಜಾಬ್ನಲ್ಲಿ ಆಪ್ ಆಗಲೇ ಹೊಸ ಯುಗವನ್ನು ಪ್ರಾರಂಭಿಸಿದೆ. ಆದರೆ, ಬಿಜೆಪಿ ಇನ್ನೂ ಸರ್ಕಾರವನ್ನೇ ರಚಿಸಿಲ್ಲ ಎಂದು ಟೀಕಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ