ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

ಶುಕ್ರವಾರ, 10 ಫೆಬ್ರವರಿ 2023 (11:28 IST)
ಶ್ರೀನಗರ : ದೇಶದಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 59 ದಶಲಕ್ಷ ಟನ್ ಲಿಥಿಯಮ್ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಲಿಥಿಯಮ್ ಹಗುರವಾದ ಲೋಹವಾಗಿದ್ದು, ಇದನ್ನು ಇ.ವಿ (ವಿದ್ಯುತ್ ಚಾಲಿತ ವಾಹನ) ಬ್ಯಾಟರಿಗಳ ತಯಾರಿಕೆಗೆ ಬಳಸಲಾಗುತ್ತದೆ.  ಭಾರತೀಯ ಭೂಗರ್ಭಶಾಸ್ತ್ರ ಸರ್ವೇಕ್ಷಣಾ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನ ಪ್ರದೇಶದಲ್ಲಿ 59 ಲಕ್ಷ ಟನ್ಗಳಷ್ಟು ಲಿಥಿಯಮ್ ನಿಕ್ಷೇಪವಿರುವುದು ಕಂಡುಬಂದಿದೆ.

ಲಿಥಿಯಮ್ ಹಾಗೂ ಚಿನ್ನ ಸೇರಿದಂತೆ 51 ಖನಿಜ ಬ್ಲಾಕ್ಗಳನ್ನ ಆಯಾ ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಲಾಗಿದೆ ಎಂದು ಗಣಿ ಸಚಿವಾಲಯ ಗುರುವಾರ ತಿಳಿಸಿದೆ.

ಪತ್ತೆಹಚ್ಚಲಾದ 51 ಖನಿಜ ಬ್ಲಾಕ್ಗಳಲ್ಲಿ 5 ಬ್ಲಾಕ್ಗಳು ಚಿನ್ನ, ಇತರ ಬ್ಲಾಕ್ಗಳು ಪೊಟ್ಯಾಶ್, ಮಾಲಿಬ್ಡಿನಮ್, ಮೂಲ ಲೋಹ ಸರಕುಗಳಿಗೆ ಸಂಬಂಧಿಸಿವೆ. ಇವು ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಆಂಧ್ರಪ್ರದೇಶ, ಛತ್ತೀಸ್ಗಢ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣ ಸೇರಿ 11 ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ಸಚಿವಾಲಯ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ