ಎಲ್‌ ಕೆ.ಅಡ್ವಾಣಿಗೆ ಭಾರತ ರತ್ನ ಪ್ರದಾನ: 'ಅತ್ಯಂತ ವಿಶೇಷ' ಕ್ಷಣ ಎಂದ ಪ್ರಧಾನಿ ಮೋದಿ

Sampriya

ಭಾನುವಾರ, 31 ಮಾರ್ಚ್ 2024 (17:07 IST)
Photo Courtesy X
ನವದೆಹಲಿ: ದೇಶದ ಪ್ರಗತಿಗೆ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರ ನಿರಂತರ ಕೊಡುಗೆಗಳನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನವನ್ನು ವೀಕ್ಷಿಸಿದ್ದು 'ಅತ್ಯಂತ ವಿಶೇಷ'  ಕ್ಷಣವಾಗಿದೆ ಎಂದರು.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪಿಎಂ ಮೋದಿ, "ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವುದನ್ನು ವೀಕ್ಷಿಸಲು ತುಂಬಾ ವಿಶೇಷವಾಗಿದೆ. ಈ ಗೌರವವು ನಮ್ಮ ರಾಷ್ಟ್ರದ ಪ್ರಗತಿಗೆ ಅವರ ನಿರಂತರ ಕೊಡುಗೆಗಳನ್ನು ಗುರುತಿಸುತ್ತದೆ" ಎಂದು ಬರೆದುಕೊಂಡಿದ್ದಾರೆ.

"ಸಾರ್ವಜನಿಕ ಸೇವೆಗೆ ಅವರ ಸಮರ್ಪಣೆ ಮತ್ತು ಆಧುನಿಕ ಭಾರತವನ್ನು ರೂಪಿಸುವಲ್ಲಿ ಅವರ ಪ್ರಮುಖ ಪಾತ್ರವು ನಮ್ಮ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ಕಳೆದ ಹಲವಾರು ದಶಕಗಳಲ್ಲಿ ಅವರೊಂದಿಗೆ ಬಹಳ ನಿಕಟವಾಗಿ ಕೆಲಸ ಮಾಡುವ ಅವಕಾಶವನ್ನು ಪಡೆದಿದ್ದಕ್ಕಾಗಿ ನಾನು ಹೆಮ್ಮೆಪಡುತ್ತೇನೆ" ಎಂದು ಅವರು ಹೇಳಿದರು.

ಎಲ್‌ ಕೆ ಅಡ್ವಾಣಿ ಅವರನ್ನು ಸನ್ಮಾನಿಸಿದ ಸಂದರ್ಭದ ಕ್ಷಣಗಳನ್ನೂ ಪ್ರಧಾನಿ ಹಂಚಿಕೊಂಡರು.

ಎಲ್‌ಕೆ ಅಡ್ವಾಣಿ ಅವರ ಅನಾರೋಗ್ಯದ ಹಿನ್ನೆಲೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭಾರತ ರತ್ನ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಮಾಜಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಉಪಸ್ಥಿತರಿದ್ದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಇಬ್ಬರು ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್ ಮತ್ತು ಪಿವಿ ನರಸಿಂಹ ರಾವ್ ಸೇರಿದಂತೆ ನಾಲ್ವರು ಗಣ್ಯ ವ್ಯಕ್ತಿಗಳಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಲಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ