ಲೌಡ್‌ಸ್ಪೀಕರ್‌ ಅಳವಡಿಕೆ ಮೂಲಭೂತ ಹಕ್ಕಲ್ಲ!

ಸೋಮವಾರ, 23 ಮೇ 2022 (10:45 IST)
ಮಸೀದಿಗಳಲ್ಲಿ ಲೌಡ್ಸ್ಪೀಕರ್ ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ದೇಶದ ಹಲವೆಡೆ ಮಸೀದಿಗಳಲ್ಲಿ ಅಕ್ರಮವಾಗಿ ಲೌಡ್ಸ್ಪೀಕರ್ ಹಾಕಿ ಆಜಾನ್ ಮೊಳಗಿಸಲಾಗುತ್ತಿದೆ ಎಂದು ಗಲಾಟೆಗಳ ನಡೆದಿರುವ ನಡುವೆಯೇ, ಹೈಕೋರ್ಚ್ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ ಹಾಗೂ ಅಳವಡಿಕೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದೆ.

ಬದಾಯೂ ಜಿಲ್ಲೆಯ ಧೋರನ್ಪುರ ಗ್ರಾಮದ ನೂರಾನಿ ಮಸೀದಿಯಲ್ಲಿ ಆಜಾನ್ ಮೊಳಗಿಸಲು ಲೌಡ್ಸ್ಪೀಕರ್ ಅಳವಡಿಕೆಗೆ ಅನುಮತಿ ಕೋರಿ, ಬಿಸೌಲಿ ಉಪವಿಭಾಗಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲಾಗಿತ್ತು.

ಆದರೆ ಈ ಅರ್ಜಿಯನ್ನು ಉಪವಿಭಾಗಾಧಿಕಾರಿಗಳು 2021ರ ಡಿ.3ರಂದು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಇರ್ಫಾನ್ ಎಂಬ ವ್ಯಕ್ತಿ ಹೈಕೋರ್ಚ್ ಮೊರೆ ಹೋಗಿದ್ದ. ‘ಉಪವಿಭಾಗಾಧಿಕಾರಿಗಳ ನಿರ್ಧಾರದಿಂದ ನಮ್ಮ ಕಾನೂನಾತ್ಮಕ ಹಕ್ಕು ಹಾಗೂ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ’ ಎಂದು ವಾದಿಸಿದ್ದ.

ಆದರೆ ಅರ್ಜಿ ತಿರಸ್ಕರಿಸಿದ ಹೈಕೋರ್ಚ್ನ ದ್ವಿಸದಸ್ಯ ಪೀಠ, ‘ಮಸೀದಿ ಮೇಲೆ ಲೌಡ್ ಸ್ಪೀಕರ್ ಅಳವಡಿಕೆ ಮೂಲಭೂತ ಹಕ್ಕಲ್ಲ’ ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ