ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕೊಂದ ಪ್ರೇಮಿ
21 ವರ್ಷದ ಯುವತಿಗೆ ಯುವಕ ಪ್ರೇಮ ನಿವೇದನೆ ಮಾಡಿದ್ದ. ಆದರೆ ಆಕೆ ಒಪ್ಪಿರಲಿಲ್ಲ. ಇಷ್ಟಕ್ಕೇ ಕೋಪಗೊಂಡು ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಈ ವಿಡಿಯೋಗಳು ವೈರಲ್ ಆಗಿದ್ದವು.
ಘಟನೆ ಬಳಿಕ ಯುವಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೊಲೆ ಮಾಡುವಾಗ ಸ್ಥಳೀಯರು ಆತನನ್ನು ತಡೆಯಲು ಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.