ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನು ಕೊಂದ ಪ್ರೇಮಿ

ಸೋಮವಾರ, 21 ಮಾರ್ಚ್ 2022 (10:40 IST)
ಚೆನ್ನೈ: ಪ್ರಿಯತಮೆ ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಆಕೆಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

35 ವರ್ಷದ ವ್ಯಕ್ತಿ ಆರೋಪಿಯಾಗಿದ್ದು ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೈಮೇಲೆ ರಕ್ತದ ಕಲೆಯಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಒಬ್ಬನೇ ಕುಳಿತಿರುವುದನ್ನು ನೋಡಿದಾಗ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಐದು ವರ್ಷಗಳಿಂದ ಮಹಿಳೆ ಮತ್ತು ಆರೋಪಿ ನಡುವೆ ಪ್ರೇಮ ಸಂಬಂಧವಿತ್ತು. ಮದ್ಯದ ಅಮಲಿನಲ್ಲಿ ಆರೋಪಿ ಮಹಿಳೆಗೆ ಸೆಕ್ಸ್ ಗೆ ಒತ್ತಾಯಿಸಿದ್ದ. ಆದರೆ ಆಕೆ ನಿರಾಕರಿಸಿದಾಗ ಸಿಟ್ಟಿನಿಂದ ಕೊಲೆ ಮಾಡಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ