ಪ್ರೀತಿಗೆ ಮನೆಯವರ ವಿರೋಧ: ಯುವ ಜೋಡಿ ಆತ್ಮಹತ್ಯೆ
ಫಾರ್ಮಸಿ ಓದುತ್ತಿದ್ದ 22 ವರ್ಷದ ಯುವಕ ಮತ್ತು 20 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮ ಪ್ರೀತಿಗೆ ಮನೆಯವರು ಒಪ್ಪಿಗೆ ಕೊಡಲ್ಲ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದುಕೊಂಡಿದ್ದಾರೆ.
ಇದೀಗ ಯುವ ಪ್ರೇಮಿಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.