ತಮಿಳುನಾಡು ರೈತರ ಸಾಲ ಮನ್ನಾ ಮಾಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
ಐದು ಎಕರೆ ಹೊಂದಿರುವ ರೈತರ ಸಾಲ ಮನ್ನಾ ಮಾಡಲು ರಾಜ್ಯ ಸರಕಾರ ನಿರ್ಧರಿಸಿತ್ತು. ಆದರೆ, ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ.
ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಹೈಕೋರ್ಟ್, ಸಾಲ ಮರುಪಾವತಿ ಮಾಡದ ರೈತರ ಮೇಲೆ ದಂಡ ವಿಧಿಸುವುದು ಬೇಡ, ಆಸ್ತಿ ಜಪ್ತಿ ಮಾಡುವುದು ಬೇಡ ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.