ವಿಶ್ವದಾಖಲೆಯ ಪುಟದಲ್ಲಿ ಸೇರಿದ ಮಹಾಕುಂಭಮೇಳ: ಕೊನೆಯ ದಿನವೂ ಕೋಟಿ ಭಕ್ತರಿಂದ ಪುಣ್ಯಸ್ಥಾನ

Sampriya

ಬುಧವಾರ, 26 ಫೆಬ್ರವರಿ 2025 (20:33 IST)
Photo Courtesy X
ಪ್ರಯಾಗ್‌ರಾಜ್‌: ವಿಶ್ವದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭಮೇಳಕ್ಕೆ ತೆರೆಬಿದ್ದಿದೆ. ಒಂದೂವರೆ ತಿಂಗಳಿಂದ ನಡೆದ ಅತಿದೊಡ್ಡ ಅಧ್ಯಾತ್ಮಿಕ ಮೇಳದಲ್ಲಿ ಕೋಟ್ಯಂತರ ಭಕ್ತರು ಭಕ್ತಿಪರವಶರಾಗಿದ್ದಾರೆ.

ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವದಲ್ಲಿ 65 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದು, ಇದು ವಿಶ್ವದಾಖಲೆಯ ಪುಟದಲ್ಲಿ ಸೇರಿಕೊಂಡಿದೆ. ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಬುಧವಾರ ನಡೆದ ಕೊನೆಯ ಅಮೃತಸ್ನಾನದಲ್ಲಿ ಒಂದು ಕೋಟಿಗೂ ಅಧಿಕ ಜನರು ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು ಪುನೀತರಾದರು.  

45 ದಿನಗಳ ಕಾಲ ನಡೆದ ಮಹಾಕುಂಭ ಮೇಳದಲ್ಲಿ 183 ದೇಶಗಳ ಪ್ರತಿನಿಧಿಗಳು, ಲಕ್ಷಾಂತರ ಕೈದಿಗಳು ಅಮೃತಸ್ನಾನ ಮಾಡಿದರು. ಮಹಾಕುಂಭಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಒಟ್ಟು ₹ 7,500 ಕೋಟಿ ವೆಚ್ಚ ಮಾಡಿದೆ.

ಮಂಗಳವಾರ ರಾತ್ರಿಯಿಂದಲೇ ತ್ರಿವೇಣಿ ಸಂಗಮದಲ್ಲಿ ಬೀಡುಬಿಟ್ಟಿದ್ದ ಕೋಟ್ಯಂತರ ಭಕ್ತರು ಬುಧವಾರ ಬ್ರಾಹ್ಮೀ ಮುಹೂರ್ತದಲ್ಲಿ ಪುಣ್ಯಸ್ನಾನ ಮಾಡಿದರು. ಬೆಳಗ್ಗೆ 8 ಗಂಟೆಗೆ ಸುಮಾರು 40 ಲಕ್ಷ ಭಕ್ತರು ಅಮೃತ ಸ್ನಾನ ಮಾಡಿದರು.

ಬುಧವಾರ ಅಮೃತಸ್ನಾನ ಮಾಡಲು ಬಂದಿದ್ದ ಭಕ್ತರ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಸುರಿಸಲಾಯ್ತು. ಮುಂಜಾಗ್ರತಾ ಕ್ರಮವಾಗಿ ಸಾಕಷ್ಟು ಕ್ರಮಗಳನ್ನು ಉತ್ತರ ಪ್ರದೇಶ ಸರ್ಕಾರ ತೆಗೆದುಕೊಂಡಿತ್ತು. ಸಿಎಂ ಯೋಗಿ ಆದಿತ್ಯನಾಥ್  ಗೋರಖ್‌ಪುರದ ವಾರ್ ರೂಂನಲ್ಲಿ ಕುಳಿತು ಇಡೀ ದಿನ ಮಹಾಕುಂಭಮೇಳವನ್ನು ವೀಕ್ಷಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ