ಲೋಕಸಭೆಯಲ್ಲಿ ಮಹಾದಾಯಿ ವಿವಾದ ಪ್ರಸ್ತಾಪ– ಮೋದಿ ಮಧ್ಯಸ್ತಿಕೆ ಒತ್ತಾಯ

ಮಂಗಳವಾರ, 2 ಜನವರಿ 2018 (19:58 IST)
ಮಹಾದಾಯಿ ವಿವಾದದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆದಿದ್ದು, ಜನರಿಗೆ ಕುಡಿಯುವ ನೀರು ಪೂರೈಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಸ್ತಿಕೆ ವಹಿಸಬೇಕು ಎಂದು ತುಮಕೂರು ಸಂಸದ ಮುದ್ದಹನುಮೇಗೌಡ ಒತ್ತಾಯಿಸಿದ್ದಾರೆ.
 
ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ ಹನುಮೇಗೌಡ ಅವರು, ಜನರಿಗೆ ಕುಡಿಯುವ ನೀರು ಒದಗಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ ಆಗಿದೆ. ಆದ್ದರಿಂದ ಮಹಾದಾಯಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
 
ಸರ್ಕಾರದ ಪರವಾಗಿ ಉತ್ತರ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್, ಯೋಜನೆ ಅನುಷ್ಠಾನಕ್ಕಾಗಿ ಪ್ರಯತ್ನಗಳು ಮುಂದುವರಿದಿವೆ ಎಂದು ಸಮಜಾಯಿಷಿ ನೀಡಿದರು. ಈ ಹಂತದಲ್ಲಿ ಗೌಡರು ಮತ್ತು ಅನಂತ್ ಕುಮಾರ್ ನಡುವೆ ವಾದ ವಿವಾದ ನಡೆಯಿತು. ಸಚಿವರ ಉತ್ತರದಿಂದ ಕಾಂಗ್ರೆಸ್ ಸದಸ್ಯರು ತೃಪ್ತರಾಗದೇ ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿದಾಗ ಬಿಜೆಪಿ ಸದಸ್ಯರು ವಾಗ್ವಾದಕ್ಕೆ ಇಳಿದರು. ಈ ಹಂತದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಕೋಲಾಹಲ ವಾತಾವರಣ ನಿರ್ಮಾಣವಾಗಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ