ಮೃತ್ಯುಕುಂಭವಾದ ಮಹಾಕುಂಭ: ಮೋದಿ, ಯೋಗಿ ಸರ್ಕಾರಗಳ ಕಿವಿಹಿಂಡಿದ ಮಮತಾ ಬ್ಯಾನರ್ಜಿ

Sampriya

ಮಂಗಳವಾರ, 18 ಫೆಬ್ರವರಿ 2025 (17:51 IST)
Photo Courtesy X
ಕೋಲ್ಕತ್ತಾ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ನಿರ್ವಹಣೆ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಯೋಗಿ ಆದಿತ್ಯನಾಥ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಅವರು, ಮಹಾಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ ಎಂದು ಮಂಗಳವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅವರು ಗಂಭೀರ ಆರೋಪ ಮಾಡಿದ್ದಾರೆ.

 ಹಾ ಕುಂಭಮೇಳದಲ್ಲಿ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದುರುಪಯೋಗದ ಆರೋಪಗಳನ್ನು ಹೊರಿಸಿದ ಅವರು, ಬಡವರಿಗೆ ಕುಂಭಮೇಳದಲ್ಲಿ ಯಾವುದೇ ವ್ಯವಸ್ಥೆಗಳಿಲ್ಲ. ಹೆಚ್ಚು ಜನರು ಸೇರುವ ಕಡೆ ಕಾಲ್ತುಳಿತ ಸಾಮಾನ್ಯ. ಆದರೆ, ವ್ಯವಸ್ಥೆಗಳನ್ನು ಮಾಡುವುದು ಸರ್ಕಾರ ಕರ್ತವ್ಯ ಎಂದು ಯೋಗಿ ಸರ್ಕಾರದ ಕಿವಿ ಹಿಂಡಿದ್ದಾರೆ.

ಮಹಾ ಕುಂಭಮೇಳವನ್ನು ನಾನು ಕೂಡ ಗೌರವಿಸುತ್ತೇನೆ. ಪವಿತ್ರ ಗಂಗಾ ಮಾತೆಯನ್ನು ಗೌರವಿಸುತ್ತೇನೆ. ಆದರೆ,  ಸರ್ಕಾರಗಳು ಸರಿಯಾದ ನಿರ್ವಹಣೆ ಇಲ್ಲ. ಶ್ರೀಮಂತರು, ವಿಐಪಿಗಳಿಗೆ 1 ಲಕ್ಷಕ್ಕೂ ಹೆಚ್ಚಿನ ಬೆಲೆಯಲ್ಲಿ ಶಿಬಿರಗಳನ್ನು ಪಡೆಯಲು ವ್ಯವಸ್ಥೆಗಳು ಲಭ್ಯವಿದೆ. ಬಡವರಿಗೆ ಅಲ್ಲಿ ಸಮರ್ಪಕ ವ್ಯವಸ್ಥೆ ಮಾಡಿಲ್ಲ ಎಂದು ದೂರಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ