ಮುಂಬೈ : ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಹಿಂದೆ ಮಹಾರಾಷ್ಟ್ರದ ವಸತಿ ಸಚಿವ ಜಿತೇಂದ್ರ ಅವ್ಹಾದ್ ಗೆ ಸೋಂಕು ತಗುಲಿದ್ದು, ಈಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೀಗ ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಅವರನ್ನು ನಾಂದೇಡ್ ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.