ಮಹಾರಾಷ್ಟ್ರ ಮುಖ್ಯಮಂತ್ರಿ ಹೆಲಿಕಾಪ್ಟರ್ ಕ್ರ್ಯಾಶ್ ಲ್ಯಾಂಡಿಂಗ್

ಗುರುವಾರ, 25 ಮೇ 2017 (12:52 IST)
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಕ್ರ್ಯಾಶ್ ಲ್ಯಾಂಡಿಂಗ್‌ ಆಗಿದ್ದರಿಂದ ಕೂದಲೆಳೆಯ ಅಂತರದಲ್ಲಿ ಸಿಎಂ ಪಾರಾಗಿದ್ದಾರೆ.
 
ಲಾತೂರ್ ಬಳಿಯ ನಿಲಂಗಾ ಹೆಲಿಪ್ಯಾಡ್‌ನಲ್ಲಿ ಸಿಎಂ ದೇವೇಂದ್ರ ಫಡ್ನವೀಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಕ್ರ್ಯಾಶ್ ಲ್ಯಾಂಡಿಂಗ್‌‌ಗೆ ಒಳಗಾಗಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಉಂಟು ಮಾಡಿತ್ತು. ಆದರೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಾನು ಮತ್ತು ನನ್ನ ಟೀಂ ಸುರಕ್ಷಿತವಾಗಿದೆ. ಹೆಲಿಕಾಪ್ಟರ್ ಹಾರಾಟ ಆರಂಭವಾಗುತ್ತಿದ್ದಂತೆ ತುರ್ತು ಭೂ ಸ್ಪರ್ಶವಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸಿಎಂ ಫಡ್ನವೀಸ್ ಸಾಮಾಜಿಕ ಅಂತರ್ಜಾಲ ತಾಣವಾದ ಟ್ವೀಟ್‌ನಲ್ಲಿ ಟ್ವೀಟ್ ಮಾಡಿದ್ದಾರೆ.
 
ನಂತರ ಫಡ್ನವೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರಿನಲ್ಲಿ ಮುಂಬೈನತ್ತ ಪ್ರಯಾಣ ಬೆಳಸಿದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.  
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ