ನವದೆಹಲಿ: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ಜತೆಗೆ ಒಗ್ಗಟ್ಟಾಗಿ ಚುನಾವಣೆ ಎದುರಿಸಿದ್ದ ಬಿಜೆಪಿ ಮೈತ್ರಿ ಕೂಟಕ್ಕೆ ಒಟ್ಟು 288 ಸ್ಥಾನಗಳ ಪೈಕಿ 166 ಸ್ಥಾನಗಳಲ್ಲಿ ಮುನ್ನಡೆ ಸಿಕ್ಕಿದೆ. ಇಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಕೂಟ 74 ಸ್ಥಾನದಲ್ಲಿ ಮುನ್ನಡೆಯಲ್ಲಿದೆ.
ಇನ್ನು ಹರ್ಯಾಣದಲ್ಲಿ ಒಟ್ಟು 90 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 39 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ 33 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಒಟ್ಟಾರೆ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ.