‘ಏನೇ ಆದ್ರೂ ಸರಿ.. ಬಿಜೆಪಿ ಸೋಲುವಂತೆ ಮಾಡಿ’

ಸೋಮವಾರ, 27 ನವೆಂಬರ್ 2017 (08:25 IST)
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮುಂಬರುವ ಗುಜರಾತ್ ಚುನಾವಣೆಯಲ್ಲಿ ಏನೇ ಆದರೂ ಸರಿ ಬಿಜೆಪಿ ಸೋಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
 

ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಎಎಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಪ್ರಧಾನಿ ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪಾಕಿಸ್ತಾನ ಮತ್ತು ಅದರ ಗುಪ್ತಚರ ಇಲಾಖೆ ಐಎಸ್ಐ ಕಳೆದ 70 ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ಬಿಜೆಪಿ ಸರ್ಕಾರ ಮೂರೇ ವರ್ಷದಲ್ಲಿ ಮಾಡಿದೆ. ದೇಶವನ್ನು ವಿಭಜಿಸಿ ಆಳುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದಾರೆ. ಇದೇ ವೇಳೆ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವ ಶಕ್ತಿಯುಳ್ಳ ಪಕ್ಷ ಅಥವಾ ಅಭ್ಯರ್ಥಿಗೇ ಮತ ಹಾಕಿ ಎಂದು ಅವರು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ