ಮಹಿಳಾ ಪೊಲೀಸರಿಗೆ ಬಲವಂತವಾಗಿ ಚುಂಬಿಸುತ್ತಿದ್ದ ಪುರುಷ ಪೊಲೀಸ್ ಅಮಾನತು

ಮಂಗಳವಾರ, 18 ಡಿಸೆಂಬರ್ 2018 (14:24 IST)
ತಮಿಳುನಾಡು : ತಮಿಳುನಾಡಿನ ಪೊಲೀಸ್ ಠಾಣೆಯೊಂದರಲ್ಲಿ ಪುರುಷ ಪೋಲಿಸ್ ಒಬ್ಬರು  ಮಹಿಳಾ ಪೊಲೀಸರಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ.


ತಮಿಳುನಾಡಿನ ಪೊಲೀಸ್ ಠಾಣೆಯೊಂದರಲ್ಲಿ ಪುರುಷ ಪೋಲಿಸ್ ಒಬ್ಬರು ಮಹಿಳಾ ಸಹೋದ್ಯೋಗಿ ಅವರನ್ನು ಬಲವಂತವಾಗಿ ಚುಂಬಿಸುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ . ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆ ತಮಿಳುನಾಡಿನ ಪೊಲೀಸರಿಗೆ ತೀವ್ರ ಮುಜುಗರವನ್ನುಂಟುಮಾಡಿದೆ.


ಈ ಬಗ್ಗೆ ಮಹಿಳಾ ಪೊಲೀಸರು ಪುರುಷ ಪೋಲಿಸ್ ವಿರುದ್ಧ ದೂರು ನೀಡಿದ್ದು, ತಮ್ಮ ಜೊತೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಅನುಚಿತ ವರ್ತನೆ ತೋರಿದ ಪುರುಷ ಪೋಲಿಸ್ ನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ