ಪ್ರಜಾಪ್ರಭುತ್ವ ಬೇಕೋ, ಸರ್ವಾಧಿಕಾರ ಬೇಕೋ ನೀವೇ ನಿರ್ಧರಿಸಿ: ಮಲ್ಲಿಕಾರ್ಜುನ ಖರ್ಗೆ

Krishnaveni K

ಭಾನುವಾರ, 31 ಮಾರ್ಚ್ 2024 (15:48 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಬಳಿಕ ನಿಮಗೆ ಪ್ರಜಾಪ್ರಭುತ್ವ ಬೇಕೋ, ಸರ್ವಾಧಿಕಾರ ಬೇಕೋ ಎಂದು ನೀವೇ ನಿರ್ಧರಿಸಿ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಇಂದು ಇಂಡಿಯಾ ಒಕ್ಕೂಟ ಪಕ್ಷಗಳ ಸಮಾವೇಶ ನಡೆಸಲಾಗಿದೆ. ಈ ಸಮಾವೇಶದಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಮೋದಿಯನ್ನು ಸರ್ವಾಧಿಕಾರಿ ಎಂದಿದ್ದಾರೆ.

‘ನಮ್ಮ ಪಕ್ಷದ ಹಣಕಾಸು ಮೂಲಗಳನ್ನು ಬ್ಲಾಕ್ ಮಾಡಿ ಚುನಾವಣೆ ನಡೆಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾಗೆ ಹೇಳಿದ್ದೆ. ಈ ಚುನಾವಣೆ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಣೆಗಾಗಿ ನಡೆಯುತ್ತಿದೆ. ನಾವು ಒಗ್ಗಟ್ಟಿನಿಂದ ಹೋರಾಡಬೇಕಿದೆ. ನಾವು ಒಗ್ಗಟ್ಟಾಗಿದ್ದರೆ ಮಾತ್ರ ಹೋರಾಡಲು ಸಾಧ‍್ಯ. ನಾವೇ ಪರಸ್ಪರ ಕಚ್ಚಾಡುತ್ತಿದ್ದರೆ ಹೋರಾಡಲು ಸಾಧ‍್ಯವಿಲ್ಲ’ ಎಂದು ಖರ್ಗೆ ಹೇಳಿದ್ದಾರೆ.

ಇನ್ನೂ ಮುಂದುವರೆದು ‘ನಿಮಗೆ ಪ್ರಜಾಪ್ರಭುತ್ವ ಬೇಕೋ, ಸರ್ವಾಧಿಕಾರ ಬೇಕೋ ಎಂದು ನೀವೇ ನಿರ್ದರಿಸಿ. ಸರ್ವಾಧಿಕಾರವನ್ನು ಬೆಂಬಲಿಸುವವರನ್ನು ದೇಶದಿಂದಲೇ ಓಡಿಸಬೇಕು. ಬಿಜೆಪಿ ಮತ್ತು ಆರ್ ೆಸ್ಎಸ್ ಆ ರೀತಿಯ ವಿಷಗಳು. ನೀವು ವಿಷ ಟೇಸ್ಟ್ ಮಾಡಿದರೂ ಜೀವ ಕಳೆದುಕೊಳ್ಳುತ್ತೀರಿ’ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ