ಪೆಟ್ರೋಲ್ ದರ ಇಳಿಸದೇ ಕೇಂದ್ರ ಜನರನ್ನು ಲೂಟಿ ಮಾಡ್ತಿದೆ: ಮಲ್ಲಿಕಾರ್ಜುನ ಖರ್ಗೆ

Krishnaveni K

ಸೋಮವಾರ, 17 ಮಾರ್ಚ್ 2025 (19:11 IST)
ನವದೆಹಲಿ: ಪೆಟ್ರೋಲ್ ದರವನ್ನು ಇಳಿಸದೇ ಕೇಂದ್ರ ಸರ್ಕಾರ ಜನರನ್ನು ಲೂಟಿ ಮಾಡ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡದೇ ಜನರನ್ನು ಅಕ್ಷರಶಃ ಲೂಟಿ ಮಾಡುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

2014 ರ ಮೇ ಬಳಿಕ ಕಚ್ಚಾತೈಲ ಬೆಲೆ 34 ಶೇಕಡಾದಷ್ಟು ಇಳಿಕೆಯಾಗಿದೆ. ಕಳೆದ 10 ವರ್ಷಗಳಲ್ಲಿ 36 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡಲಾಗಿದೆ. ಹಾಗಿದ್ದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿಲ್ಲ ಎಂದು ಟೀಕಿಸಿದ್ದಾರೆ.

ಇನ್ನು, ಇತ್ತೀಚೆಗೆ ಮೋದಿಯ ಪಾಡ್ ಕಾಸ್ಟ್ ಬಗ್ಗೆಯೂ ವ್ಯಂಗ್ಯ ಮಾಡಿರುವ ಖರ್ಗೆ, ಜನರ ಕಷ್ಟಗಳನ್ನು ಅರಿಯುವ ಪ್ರಯತ್ನ ಮಾಡದೇ ಮೋದಿ ಪಾಡ್ ಕಾಸ್ಟ್, ಮನ್ ಕೀ ಬಾತ್ ನಂತಹ ಒನ್ ವೇ ಸಂವಹನದಲ್ಲಿ ಮುಳುಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ