ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ನಿಂದಿಸಿದ ಮಲ್ಲಿಕಾರ್ಜುನ ಖರ್ಗೆ
ನೇತಾಜಿ ಹೆಸರಿನಲ್ಲಿ ಪ್ರಧಾನಿ ಮೋದಿ ಗಿಮಿಕ್ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅವರು 13 ವರ್ಷ ಗುಜರಾತ್ ಸಿಎಂ ಆಗಿದ್ದಾಗ ಮೋದಿ ಎಲ್ಲಿದ್ದ? ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಚುನಾವಣೆ ಹತ್ತಿರ ಬರುತ್ತಿರುವಾಗ ಮೋದಿಗೆ ನೇತಾಜಿ, ಸರ್ದಾರ್ ವಲ್ಲಭಾಯ್ ಪಟೇಲ್, ನೆಹರು ಮುಂತಾದ ಸ್ವಾತಂತ್ರ್ಯ ಹೋರಾಟಗಾರರ ನೆನಪಾಗುತ್ತಿದೆ. ಇಷ್ಟು ದಿನ ಬಿಜೆಪಿ ಹಾಗೂ ಸಂಘದ ಕಚೇರಿಗಳಲ್ಲಿ ಇವರ ಫೋಟೋಗಳೂ ಇರಲಿಲ್ಲ. ಮೋದಿ ಮೊದಲು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಗೌರವ ಕೊಡಲು ಕಲಿಯಲಿ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.