ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿ ವಿರುದ್ಧ ದೂರು ದಾಖಲು

ಗುರುವಾರ, 12 ನವೆಂಬರ್ 2015 (16:24 IST)
ಆರೋಪಿಯೊಬ್ಬ ಅತ್ಯಾಚಾರವೆಸಗಿ ಅತ್ಯಾಚಾರವೆಸಗುತ್ತಿರುವ ದೃಶ್ಯದ ವಿಡಿಯೋ ಮಾಡಿಕೊಂಡು ಇಂಟರ್‌ನೆಟ್‌ನಲ್ಲಿ ಹಾಕುವುದಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
 
ಆಧಾರ ಕಾರ್ಡ್‌ ಕೊಡಿಸುವುದಾಗಿ ಗೆಳೆತನ ಬೆಳೆಸಿದ ಅಬ್ದುಲ್, ನಂತರ ಎರಡು ಲಕ್ಷ ರೂಪಾಯಿಗಳನ್ನು ಸಾಲವಾಗಿ ಪಡೆದುಕೊಂಡು ಹಿಂತಿರುಗಿಸದೆ ವಂಚಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
 
ಹಣ ನೀಡುವಂತೆ ಆರೋಪಿ ಅಬ್ದುಲ್‌ಗೆ ಮಹಿಳೆ ಒತ್ತಾಯಿಸಿದಾಗ ನಿರ್ಜನ ಪ್ರದೇಶಕ್ಕೆ ಬರುವಂತೆ ಹೇಳಿದ್ದಾನೆ. ಮಹಿಳೆ ಅಲ್ಲಿಗೆ ಬಂದ ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುತ್ತಿರುವ ದೃಶ್ಯವನ್ನು ವಿಡಿಯೋ ಮಾಡಿಕೊಂಡು ಇಂಟರ್‌ನೆಟ್‌ನಲ್ಲಿ ಹಾಕುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಆರೋಪಿ ಅಬ್ದುಲ್ ವಿರುದ್ಧ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಶೀಘ್ರದಲ್ಲಿ ಬಂಧಿಸುವ ವಿಶ್ವಾಸವಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಸೋನ್‌ಕರ್ ತಿಳಿಸಿದ್ದಾರೆ. 
 

ವೆಬ್ದುನಿಯಾವನ್ನು ಓದಿ