ಅಪ್ರಾಪ್ತೆಯನ್ನು ಮದುವೆಯಾಗಿ ಅತ್ಯಾಚಾರ ಮಾಡಿದ ಆರೋಪಿ ಅರೆಸ್ಟ್
15 ವರ್ಷದ ಬಾಲಕಿಯನ್ನು ಮದುವೆಯಾದ ಮೇಲೆ ಆರೋಪಿ ಹಲವು ಬಾರಿ ಅತ್ಯಾಚಾರ ನಡೆಸಿದ್ದ. ಇದರಿಂದಾಗಿ ಆಕೆ ಗರ್ಭಿಣಿಯಾಗಿದ್ದಳು. ಹೆರಿಗೆಗೆ ಆಸ್ಪತ್ರೆಗೆ ದಾಖಲಾದಾಗ ವೈದ್ಯರಿಗೆ ಗಂಡ, ಅತ್ತೆ ವಯಸ್ಸಿನ ಬಗ್ಗೆ ಸುಳ್ಳು ಹೇಳಿದ್ದಾರೆ. ಅನುಮಾನಗೊಂಡು ಆಧಾರ್ ಕಾರ್ಡ್ ನೋಡಿದಾಗ ನಿಜಾಂಶ ಬಯಲಾಗಿದೆ.
ಇದರಿಂದಾಗಿ ವೈದ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬಡತನದ ಕಾರಣದಿಂದ ಬಾಲಕಿಯನ್ನು ಶಿಕ್ಷಣ ಮೊಟಕುಗೊಳಿಸಿ ಬಲವಂತವಾಗಿ ಮದುವೆ ಮಾಡಿಸಲಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿತ್ತು.