ಅಪ್ರಾಪ್ತೆಯ ಅಪಹರಿಸಿ, ಅತ್ಯಾಚಾರ: ಆರೋಪಿ ಅರೆಸ್ಟ್

ಶನಿವಾರ, 9 ಏಪ್ರಿಲ್ 2022 (09:30 IST)
ವದೆಹಲಿ: 16 ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

2021 ರ ಮೇಯಲ್ಲಿ ಘಟನೆ ನಡೆದಿತ್ತು. ಇದುವರೆಗೆ ಆರೋಪಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಹಲವು ದುಷ್ಕೃತ್ಯಗಳಲ್ಲಿ ಈ ಮೊದಲು ಭಾಗಿಯಾಗಿದ್ದ ಆರೋಪಿ ಈಗ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಈ ಸಂಬಂಧ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ