ಯುವಕನ ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಚಿತ್ರಹಿಂಸೆ
ಮಾಲಿಕನ ಮಗನಿಂದ 50 ಸಾವಿರ ರೂ. ಪಡೆದುಕೊಂಡಿದ್ದ ಯುವಕ ಲ್ಯಾಪ್ ಟಾಪ್ ಖರೀದಿ ಮಾಡಿದ್ದ. ಈಗ ಹಣ ಮರುಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಲಿಕ ಯುವಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾನೆ.
ಆತನನ್ನು ಮನಬಂದಂತೆ ಥಳಿಸಿ ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಚಿತ್ರಹಿಂಸೆ ನೀಡಿ ಅವುಗಳ ವಿಡಿಯೋ ಮಾಡಿಟ್ಟುಕೊಂಡಿದ್ದ. ಬಳಿಕ ಆ ವಿಡಿಯೋವನ್ನು ಯೂ ಟ್ಯೂಬ್ ಗೆ ಹಾಕುವುದಾಗಿ ಬೆದರಿಕೆ ಹಾಕಿದ್ದ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.