ಕೆಲಸವಿಲ್ಲದ ಬೇಸರ: ಪತ್ನಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
36 ವರ್ಷದ ವ್ಯಕ್ತಿ ಮತ್ತು ಆತನ ಪತ್ನಿ ಹಾಗೂ ಐದು ವರ್ಷದೊಳಗಿನ ಇಬ್ಬರು ಮಕ್ಕಳ ಸಮೇತ ನೇಣಿಗೆ ಶರಣಾಗಿದ್ದಾನೆ. ಕೆಲವು ದಿನಗಳಿಂದ ಈತ ನಿರುದ್ಯೋಗಿಯಾಗಿದ್ದ. ರೈಲ್ವೇ ಪರೀಕ್ಷೆಗೆ ಸಿದ್ಧನಾಗುತ್ತಿದ್ದ.
ಆದರೆ ಇದೀಗ ನಿರುದ್ಯೋಗ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಬಂಧಿಕರು ಮಕ್ಕಳನ್ನು ನೋಡಲು ಮನೆಗೆ ಬಂದಾಗ ಪ್ರತಿಕ್ರಿಯೆ ಬಾರದೇ ಇದ್ದಾಗ ಕಿಟಿಕಿ ಮೂಲಕ ಇಣುಕಿ ನೋಡಿದ್ದಾರೆ. ಈ ವೇಳೆ ನೇಣು ಹಾಕಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.