ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ದೌರ್ಜನ್ಯ
ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಆರೋಪಿ ಕಿರುಕುಳ ನೀಡಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ಆರೋಪಿ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ.
ಈ ವೇಳೆ ಆಕೆ ಗರ್ಭಿಣಿಯೂ ಆಗಿದ್ದಳು. ಹೀಗಾಗಿ ಆಕೆಗೆ ಬಲವಂತವಾಗಿ ಗರ್ಭಪಾತ ಮಾಡಿಸಿದ್ದ. ಮದುವೆಯಾಗುವಂತೆ ಕೇಳಿದಾಗ ಆಕೆಯನ್ನು ಮನೆಯಿಂದ ಹೊರಹಾಕಿ ಕಿರುಕುಳ ನೀಡಿದ್ದಾನೆ. ಈ ಸಂಬಂಧ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.