ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಗರ್ಭಿಣಿ ಯುವತಿಯನ್ನು ಕೊಂದ ಪ್ರಿಯಕರ

ಸೋಮವಾರ, 25 ಏಪ್ರಿಲ್ 2022 (11:05 IST)
ಗಾಝಿಯಾಬಾದ್: ಮದುವೆಯಾಗೆಂದು ಒತ್ತಾಯಿಸಿದ್ದಕ್ಕೆ ಗರ್ಭಿಣಿಯಾಗಿದ್ದ ಪ್ರೇಯಸಿಯನ್ನು ಪ್ರಿಯಕರನೇ ಕೊಲೆ ಮಾಡಿದ್ದಾನೆ.

ಈ ಸಂಬಂಧ ಬಿಹಾರ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ಸಮಯದಿಂದ ಇಬ್ಬರೂ ಪ್ರೇಮ ಸಂಬಂಧ ಹೊಂದಿದ್ದರು. ಯುವತಿ ಇದೀಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು. ಇತ್ತೀಚೆಗೆ ಮದುವೆಯಾಗುವಂತೆ ಪದೇ ಪದೇ ಕೇಳುತ್ತಿದ್ದಳು.

ಆದರೆ ಆಕೆಯ ಮಾತಿನಿಂದ ಆಕ್ರೋಶಗೊಂಡು ಕೊಲೆ ಮಾಡಿದ್ದಾನೆ. ಈ ಸಂಬಂಧ ಯುವತಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ