ಹಾಡುಹಗಲೇ ಪತಿಗೆ ಥಳಿಸಿ, ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು

ಬುಧವಾರ, 8 ಮೇ 2019 (09:36 IST)
ಜೈಪುರ : ಹಾಡಹಗಲಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗಳನ್ನು ತಡೆದು ಕಾಮುಕರ ಗುಂಪೊಂದು ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.




ಸಚೀನ್, ಜಿತು ಹಾಗೂ ಅಶೋಕ್ ಅತ್ಯಾಚಾರ ಎಸಗಿದ ಆರೋಪಿಗಳಾಗಿದ್ದು, ಉಳಿದಿಬ್ಬರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ದಂಪತಿಗಳು ಬೈಕ್‍ ನಲ್ಲಿ ತಾಲ್‍ವೃಕ್ಷದಿಂದ ಲಾಲ್‍ ವಾಡಿ ಗ್ರಾಮಕ್ಕೆ ತೆರಳುತ್ತಿದ್ದಾಗ ದಾರಿ ಮಧ್ಯದಲ್ಲಿ ಅಡ್ಡಗಟ್ಟಿದ  5 ಜನ ಕಾಮುಕರು  ಪತಿಗೆ ಥಳಿಸಿ ಆತನ ಎದುರೇ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಈ ಸಂಬಂಧ ಸಂತ್ರಸ್ತೆಯು ಗಾಜಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 147 (ಹಲ್ಲೆ), 354 ಬಿ (ಅತ್ಯಚಾರ) ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ