ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ಪತ್ನಿ ವಿರುದ್ಧ ಪತಿ ದೂರು

ಸೋಮವಾರ, 8 ನವೆಂಬರ್ 2021 (09:32 IST)
ಲಕ್ನೋ: ಟಿ20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ್ದಕ್ಕೆ ಪತ್ನಿ ವಿರುದ್ಧ ಪತಿಯೇ ಪೊಲೀಸರಿಗೆ ದೂರು ನೀಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಕ್ಟೋಬರ್ 24 ರಂದು ಪಂದ್ಯ ಮುಗಿದ ಬಳಿಕ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಅಲ್ಲದೆ ವ್ಯಾಟ್ಸಪ್ ಸ್ಟೇಟಸ್ ನಲ್ಲೂ ಸಂಭ್ರಮ ಹಂಚಿಕೊಂಡಿದ್ದಾರೆ.

ಈ ಕಾರಣಕ್ಕೆ ಪತ್ನಿ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ಪತಿ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಸಿಎಂ ಯೋಗಿ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ಎಫ್ ಐಆರ್ ದಾಖಲಿಸಲಾಗುವುದು ಎಂದಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ