ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ಪತ್ನಿ ವಿರುದ್ಧ ಪತಿ ದೂರು
ಅಕ್ಟೋಬರ್ 24 ರಂದು ಪಂದ್ಯ ಮುಗಿದ ಬಳಿಕ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಅಲ್ಲದೆ ವ್ಯಾಟ್ಸಪ್ ಸ್ಟೇಟಸ್ ನಲ್ಲೂ ಸಂಭ್ರಮ ಹಂಚಿಕೊಂಡಿದ್ದಾರೆ.
ಈ ಕಾರಣಕ್ಕೆ ಪತ್ನಿ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ಪತಿ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಸಿಎಂ ಯೋಗಿ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ಎಫ್ ಐಆರ್ ದಾಖಲಿಸಲಾಗುವುದು ಎಂದಿದ್ದರು.