ಅಪಘಾತದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಕದ್ದ ಪಾಪಿ
ಮಹಿಳೆಯೊಬ್ಬರಿಗೆ ಲಾರಿ ಡಿಕ್ಕಿಯಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಕೆಗೆ ಸಹಾಯ ಮಾಡುವ ಸೋಗಿನಲ್ಲಿ ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಆರೋಪಿ ದಾರಿಯಲ್ಲಿ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದಿದ್ದಾನೆ.
ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಹಿಳೆ ಸಾವನ್ನಪ್ಪಿದ್ದರು. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರಿಗೆ ಮಹಿಳೆಯ ಕುತ್ತಿಗೆಯಲ್ಲಿ ಸರ ನಾಪತ್ತೆಯಾಗಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪೊಲೀಸರು ಸರ ಕದ್ದ ವ್ಯಕ್ತಿ ಮತ್ತು ಅಪಘಾತವೆಸಗಿದ ಲಾರಿ ಚಾಲಕನನ್ನು ಬಂಧಿಸಿದ್ದಾರೆ.