ವಿಮಾನ ನಿಲ್ದಾಣದಲ್ಲೇ ವ್ಯಕ್ತಿ ಬಹಿರಂಗ ಮೂತ್ರ ವಿಸರ್ಜನೆ
ವ್ಯಕ್ತಿಯೊಬ್ಬ ದೆಹಲಿಯ ವಿಮಾನ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ಬಹಿರಂಗವಾಗಿ ಮೂತ್ರವಿಸರ್ಜನೆ ಮಾಡಿದ್ದಾನೆ.
ಜನವರಿ ೮ರಂದು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಮೂತ್ರವಿಸರ್ಜನೆ ಮಾಡಿರುವುದಾಗಿ ವರದಿಯಾಗಿದೆ.
ನಿಲ್ದಾಣದ ನಿರ್ಗಮನ ಗೇಟ್ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಪೊಲೀಸರು ಬಿಹಾರ ಮೂಲದ ಜೌಹರ್ ಅಲಿ ಖಾನ್ನನ್ನು ಬಂಧಿಸಿದ್ದರು. ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.