ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಷಯರೋಗಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿ ಮಾಡಿದ್ದೇನು?

ಶುಕ್ರವಾರ, 30 ಅಕ್ಟೋಬರ್ 2020 (05:11 IST)
ಗುರುಗ್ರಾಮ : ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ಕ್ಷಯ ರೋಗಿ ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದಾಗ ಆಕೆಯ ಮೇಲೆ ಆಸ್ಪತ್ರೆಯ ಸಿಬ್ಬಂದಿ ಮಾನಭಂಗ ಎಸಗಿದ ಘಟನೆ ಸೆಕ್ಟರ್ 44ರ ಪೋರ್ಟಿಸ್ ಆಸ್ಪತ್ರೆಯಲ್ಲಿ ನಡೆದಿದೆ.

ಸಂತ್ರಸ್ತ ಯುವತಿ ಉಸಿರಾಟದ ಸಮಸ್ಯೆಯಿಂದ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಕೆಯನ್ನು ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆಯನ್ನು ನೋಡಲು ಹೋದ ತಂದೆಗೆ  ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಟಿಪ್ಪಣಿ ಬರೆದು ನೀಡಿದ್ದಾಳೆ. ಅದರಲ್ಲಿ ಆರೋಪಿಯ ಹೆಸರು ವಿಕಾಸ್ ಎಂದು ಉಲ್ಲೇಖಿಸಿದ್ದಾಳೆ.

ತಂದೆ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಸರಿನ ಆಧಾರದ ಮೇಲೆ ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ