ಮಣಿಪುರದ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಇಂದು ಬೆಳಿಗ್ಗೆ ಉಖ್ರುಲ್‌ನಲ್ಲಿ ಪ್ರಬಲ ಐಇಡಿ ಬಾಂಬ್ ಸ್ಪೋಟಗೊಂಡಿತ್ತು. ಹೀಗಾಗಿ ಸಿಎಂ ಸ್ಥಳ ಪರಿಶೀಲನೆಗೆ ಹೋಗಿದ್ದರು. ಆ ಸಂದರ್ಭದಲ್ಲಿ ಹ್ಯಾಲಿಪ್ಯಾಡ್‌ನಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.
ಶಂಕಿತ ಉಗ್ರರು ಈ ದುಷ್ಕೃತ್ಯಕ್ಕೆ ಕೈ ಹಾಕಿರಬಹುದೆಂದು ಹೇಳಲಾಗುತ್ತಿದೆ.
ಬೆಳಗ್ಗೆ ನಡೆದ ಬಾಂಬ್ ಸ್ಪೋಟದಲ್ಲಿ ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್ ಬಿಎನ್) ನ ಇಬ್ಬರು ಯೋಧರು ಗಾಯಗೊಂಡಿದ್ದರು.
ಕೆಲ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಇಬೋಬಿ ಬರುವ ಮಾಹಿತಿ ಗೊತ್ತಿದ್ದು ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ