ಮಣಿಪುರ ಹಿಂಸಾಚಾರ : ಮತ್ತೆ ಮೂವರ ಸಾವು

ಸೋಮವಾರ, 3 ಜುಲೈ 2023 (09:44 IST)
ಇಂಫಾಲ : ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ವರದಿಯಾಗಿದ್ದು, ಘಟನೆಯಲ್ಲಿ ಭಾನುವಾರ ಮೂವರು ಸಾವನ್ನಪ್ಪಿದ್ದಾರೆ.
 
ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಖೋಯ್ಜುಮಂತಬಿ ಗ್ರಾಮದಲ್ಲಿ ಹಿಂಸಾಚಾರ ವರದಿಯಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಕೂಡಾ ಗ್ರಾಮದಲ್ಲಿ ಸ್ವಯಂಸೇವಕರಾಗಿದ್ದು, ತಾತ್ಕಾಲಿಕ ಬಂಕರ್ ಪ್ರದೇಶವನ್ನು ಕಾಪಾಡುತ್ತಿದ್ದರು ಎನ್ನಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಶನಿವಾರ ರಾತ್ರಿ ನಡೆದಿರುವ ಗುಂಡಿನ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ. ಅವರ ಪೈಕಿ ಗಾಯಗೊಂಡಿರುವ ದಂಪತಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಇಂಫಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ