ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ : ತನಿಖೆ ಆರಂಭಿಸಿದ CBI

ಭಾನುವಾರ, 30 ಜುಲೈ 2023 (12:02 IST)
ನವದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕೃತವಾಗಿ ಪ್ರಕರಣ ದಾಖಲಿಸಿಕೊಂಡಿದೆ.
 
ಕೇಂದ್ರ ಸರ್ಕಾರದ ಶಿಫಾರಸಿನ ಬಳಿಕ ಅಧಿಕೃತವಾಗಿ ದೂರು ದಾಖಲಿಸಿಕೊಂಡಿರುವ ಕೇಂದ್ರೀಯ ತನಿಖಾ ದಳ ತನಿಖೆ ಆರಂಭಿಸಿದೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ತನಿಖಾ ಸಂಸ್ಥೆ ಈ CBI ದಾಖಲಿಸಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಸೂಚನೆ ಹೊರಡಿಸಿದ ನಂತರ ಈ ಎಫ್ಐಆರ್ ದಾಖಲಿಸಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ