ಥಾಣೆ: ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟು ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಇಲ್ಲಿನ ಡೊಂಬಿವಾಲಿ ಪ್ರದೇಶದಲ್ಲಿರುವ ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ಅನಾಹುತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ ನಾಲ್ವರ ಮೃತಪಟ್ಟಿದ್ದು 25 ಜನರ ಗಾಯಗೊಂಡಿದ್ದಾರೆ. 8 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 1:40ರ ಸುಮಾರಿಗೆ ಮೂರು ಸಲ ಭಾರಿ ಸ್ಫೋಟದ ಸದ್ದು ಸಂಭವಿಸಿದೆ.