ಲಕ್ನೋ : ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಜಾಮಿಯತ್ ಉಲಮಾ-ಇ-ಹಿಂದ್ ಮುಸ್ಲಿಂ ಸಂಘಟನೆಯು ಮೇ 28, 29ರಂದು ಬೃಹತ್ ಸಮಾವೇಶಕ್ಕೆ ಕರೆ ನೀಡಿದೆ.
ಉತ್ತರಪ್ರದೇಶದ ದೇವಬಂದ್ನಲ್ಲಿ ಬೃಹತ್ ಸಭೆ ನಡೆಯಲಿದ್ದು, ಸುಮಾರು 5 ಸಾವಿರ ಮುಸ್ಲಿಂ ಸಂಘಟನೆಗಳು ಭಾಗವಹಿಸಲಿವೆ. ಈ ಸಭೆಯಲ್ಲಿ ಜ್ಞಾನವಾಪಿ, ಮಥುರಾ ಹಾಗೂ ಕುತುಬ್ ಮಿನಾರ್ನಂತಹ ಸ್ಮಾರಕಗಳ ಸುತ್ತಮುತ್ತಲಿನ ಸಮಸ್ಯೆಗಳನ್ನು ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಜಮಿಯತ್-ಉಲೇಮಾ-ಇ-ಹಿಂದ್ ಸಂಘಟನೆ ಮುಖ್ಯಸ್ಥ ಮೌಲಾನಾ ಮಹಮೂದ್ ಅಸಾದ್ ಮದನಿ ಅವರು ಈ ಹಿಂದೆ ಜ್ಞಾನವಾಪಿ ಪ್ರಕರಣದಲ್ಲಿ ಮಧ್ಯಪ್ರವೇಶಿಸದಂತೆ ಸಂಘಟನೆಗಳನ್ನು ಒತ್ತಾಯಿಸಿದ್ದರು. ಆದರೆ ಈಗ ಮಂದಿರ ಮಸೀದಿಗಳ ಚರ್ಚೆಯ ವಿರುದ್ಧ ಹಲವು ನಿರ್ಣಯಗಳನ್ನು ಅಂಗೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.