ಮಾಯಾ ಕೊಡ್ನಾನಿ ಕೇಸ್: ಕೋರ್ಟ್‌ಗೆ ಹಾಜರಾಗಿ ಸಾಕ್ಷಿ ನುಡಿದ ಅಮಿತ್ ಶಾ
ಸೋಮವಾರ, 18 ಸೆಪ್ಟಂಬರ್ 2017 (15:07 IST)
ಮಾಜಿ ಸಚಿವೆ ಮಾಯಾ ಕೊಡ್ನಾನಿ ಪರವಾಗಿ ಸಾಕ್ಷ್ಯ ಹೇಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಕೋರ್ಟ್‌ಗೆ ಹಾಜರಾಗಿ ಸಾಕ್ಷ್ಯ ನುಡಿದಿದ್ದಾರೆ.
ಕಳೆದ 2002ರಲ್ಲಿ ನಡೆದ ನರೋದಾ ಗಾಮ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಾ ಕೊಡ್ನಾನಿ ಪರವಾಗಿ ಅಮಿತ್ ಶಾ ಹೇಳಿಕೆ ನೀಡಿ, ದಂಗೆ ನಡೆದಾಗ ಮಾಯಾ ಕೊಡ್ನಾನಿ ವಿಧಾನಸಭೆಯಲ್ಲಿದ್ದರು ಎಂದು ಹೇಳಿಕೆ ನೀಡಿದ್ದಾರೆ.
ದಂಗೆ ನಡೆದ ದಿನದಂದು ನಗರದಾದ್ಯಂತ ಹಿಂಸಾಚಾರದ ವಾತಾವರಣವಿರುವ ಮಧ್ಯೆಯೂ ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದೆ. ನಂತರ ಕೊಡ್ನಾನಿಯವರನ್ನು ಭೇಟಿ ಮಾಡಿದೆ ಎಂದು ತಿಳಿಸಿದ್ದಾರೆ.
ನರೋದಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಮಾಜಿ ಸಚಿವೆ ಮಾಯಾ ಕೊಡ್ನಾನಿಯವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿತ್ತು.ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರಿದಿದೆ.
ಗುಜರಾತ್‌ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಮಾಯಾ ಕೊಡ್ನಾಮಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.