ಮಾಯಾವತಿ ಆರೋಪಕ್ಕೆ ಸಚಿವೆ ಸ್ಮೃತಿ ಇರಾನಿ ತಿರುಗೇಟು

ಬುಧವಾರ, 24 ಫೆಬ್ರವರಿ 2016 (15:04 IST)
ದೇಶದಲ್ಲಿ ದಲಿತ ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ದೊರೆಯುತ್ತಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಜಿ ಮುಖ್ಯಮಂತ್ರಿ ಮಾಯಾವತಿ ಆರೋಪಕ್ಕೆ, ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ.
 
ದಲಿತ ವಿದ್ಯಾರ್ಥಿಗಳಿಗೆ ರಕ್ಷಣೆಯಿಲ್ಲ ಎನ್ನುವುದು ಕೇವಲ ಭ್ರಮೆ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿಯೂ ಎಲ್ಲರಿಗೂ ರಕ್ಷಣೆ ನೀಡಲಾಗಿದೆ. ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾದ ರೀತಿಯಲ್ಲಿಯೇ ನಡೆದಿದೆ ಎಂದು ಹೇಳಿದ್ದಾರೆ.
 
ರಾಜ್ಯಸಭೆಯಲ್ಲಿ ಅಡಳಿತರೂಡ ಮತ್ತು ವಿಪಕ್ಷಗಳ ನಾಯಕರ ನಡುವೆ ನಡೆದ ಜಟಾಪಟಿ ಕೋಲಾಹಲ ಸೃಷ್ಟಿಸಿತ್ತು. ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದಳಾಗಿದ್ದೇನೆ. ಅನಗತ್ಯವಾಗಿ ಕೇಂದ್ರ ಸರಕಾರದ ವಿರುದ್ಧ ಆರೋಪ ಹೊರಿಸುವುದು ಸರಿಯಲ್ಲ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
 
ಹೈದ್ರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ವಿದ್ಯಾರ್ಥಿಯಾಗಿದ್ದ ರೋಹಿತ್ ವೆಮುಲಾ ಕ್ಯಾಂಪಸ್ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ.  

ವೆಬ್ದುನಿಯಾವನ್ನು ಓದಿ