ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಪ್ರಧಾನಿ ಮೋದಿ ಮೌನ ಯಾಕೆ ಎಂದ ಮಾಯಾವತಿ
ಬುಧವಾರ, 27 ಜುಲೈ 2016 (21:18 IST)
ದೇಶಾದ್ಯಂತ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಆರೋಪಿಸಿದ್ದಾರೆ.
ಗುಜರಾತ್‌ನ ಉನಾ ಜಿಲ್ಲೆಯಲ್ಲಿ ಗೋರಕ್ಷಣಾ ಸಮಿತಿಯ ಸದಸ್ಯರು ಹಾಡ ಹಗಲೇ ಸಾರ್ವಜನಿಕರ ಮುಂದೆ ದಲಿತರನ್ನು ಥಳಿಸಿದ್ದಾರೆ. ಗೋರಕ್ಷಣೆ ಹೆಸರಲ್ಲಿ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ಗುಡುಗಿದ್ದಾರೆ.
ಮಂಗಳೂರಿನ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಸೇರಿದಂತೆ ಸರಕಾರಿ ಹುದ್ದೆಯಲ್ಲಿರುವಂತಹ ದಲಿತರೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಹೀನ ಪರಿಸ್ಥಿತಿ ಎದುರಾಗಿದೆ ಎಂದು ಕಿಡಿಕಾರಿದರು.
ಮಹಾರಾಷ್ಟ್ರದಲ್ಲೂ ದಲಿರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯಗಳಂತೂ ಮಿತಿ ಮೀರಿವೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರಪ್ರದೇಶದ ಬಿಜೆಪಿ ಮುಖಂಡ ದಯಾಶಂಕರ್ ಸಿಂಗ್ ವೇಶ್ಯೆ ಎಂದು ಜರಿದ ನಂತರ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.