ಮುಲಾಯಂ, ಲಾಲುರೊಂದಿಗೆ ಮೈತ್ರಿ ಪ್ರಶ್ನಯೇ ಉದ್ಭವಿಸುವುದಿಲ್ಲ: ಮಾಯಾವತಿ

ಬುಧವಾರ, 13 ಆಗಸ್ಟ್ 2014 (15:12 IST)
ಕೋಮುವಾದಿ ಪಕ್ಷವನ್ನು ಸೋಲಿಸಲು ಮೈತ್ರಿ ಮಾಡಿಕೊಳ್ಳುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಅಹ್ವಾನವನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ತಿರಸ್ಕರಿಸಿದ್ದಲ್ಲದೇ ಮುಲಾಯಂ ಕೋಮುವಾದಿಗಳನ್ನು ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. 
 
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಮುಲಾಯಂ ಸಿಂಗ್ ಕೋಮುವಾದಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕೇವಲ ಅಧಿಕಾರ ಪಡೆಯಲು ಸಂದರ್ಭವಾದಿ ರಾಜಕಾರಣಿಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ಸಮಾಜವಾದಿ ಪಕ್ಷದೊಂದಿಗೆ ಬಹುಜನ ಸಮಾಜ ಪಕ್ಷ ಯಾವತ್ತು ಮೈತ್ರಿ ಮಾಡಿಕೊಳ್ಳುವುದಿಲ್ಲ. ಚುನಾವಣೆಯಲ್ಲೂ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
 
ಉತ್ತರಪ್ರದೇಶದಲ್ಲಿ ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಸಮಾಜವಾದಿ ಪಕ್ಷ ಮತ್ತು ಬಿಎಸ್‌ಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳಬೇಕು ಎನ್ನುವ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಸಲಹೆಗೆ ತಿರುಗೇಟು ನೀಡಿದ ಮಾಯಾವತಿ ಇಬ್ಬರು ಯಾದವರು ಅಧಿಕಾರದ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಲೇವಡಿ ಮಾಡಿದ್ದಾರೆ. 
 
 
 

ವೆಬ್ದುನಿಯಾವನ್ನು ಓದಿ