ದೇಶದಲ್ಲಿ ತುರ್ತುಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಿದೆ: ಮಾಯಾವತಿ

ಸೋಮವಾರ, 18 ಸೆಪ್ಟಂಬರ್ 2017 (18:46 IST)
ದೇಶದಲ್ಲಿ ತುರ್ತುಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿ ಎದುರಾಗಿದೆ ಎಂದು ಮಾಜಿ ಸಿಎಂ ಮಾಯಾವತಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರಕಾರ ವಿಪಕ್ಷಗಳ ನಾಯಕರನ್ನು ಹಣಿಯಲು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ರೈತರಿಗೆ ಪ್ರಧಾನಿ ಮೋದಿ ನೀಡಿದ ಯಾವುದೇ ಭರವಸೆಗಳು ಈಡೇರಿಲ್ಲ ಎಂದು ಗುಡುಗಿದರು.  
 
ಲಕ್ನೋದಿಂದ 450 ಕಿ.ಮೀ ದೂರದಲ್ಲಿರುವ ಮೀರತ್‌ ನಗರದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಸಹರಣಪುರ್‌ ಜಿಲ್ಲೆಯ ಗ್ರಾಮವೊಂದಕ್ಕೆ ಭೇಟಿ ನೀಡಲು ತೆರಳಿದ್ದಾಗ ನನ್ನ ಮೇಲೆ ಹತ್ಯಾಯತ್ನ ಕೂಡಾ ನಡೆಯಿತು ಎಂದು ಆರೋಪಿಸಿದರು.
 
ವಿಪಕ್ಷಗಳ ನಾಯಕರನ್ನು ಗುರಿಯಾಗಿಸಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಇಲಾಖೆಗಳನ್ನು ಪ್ರಧಾನಿ ಮೋದಿ ಸರಕಾರ ಬಳಸಿಕೊಳ್ಳುತ್ತಿದೆ. ಇಂತಹ ಕೆಟ್ಟ ಸ್ಥಿತಿ ದೇಶದಲ್ಲಿ ಯಾವತ್ತೂ ಎದುರಾಗಿರಲಿಲ್ಲ ಎಂದರು.
 
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ರೈತರ ಒಂದು ಲಕ್ಷ ರೂಪಾಯಿಗಳ ಸಾಲ ಮನ್ನಾ ಮಾಡವುದಾಗಿ ಭರವಸೆ ನೀಡಿತ್ತು. ಹಲವಾರು ರೈತರಿಗೆ 1 ರೂಪಾಯಿ ಸಾಲ ಮನ್ನಾದ ಚೆಕ್‌ಗಳು ಬಂದಿವೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಜಿ ಸಿಎಂ ಮಾಯಾವತಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ