ಗರ್ಭಿಣಿ ಮಹಿಳೆಗೆ ಕಪಾಳಮೋಕ್ಷ ಮಾಡಿದ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ದೂರು

ಸೋಮವಾರ, 20 ಏಪ್ರಿಲ್ 2015 (17:48 IST)
ಪ್ರಸವದ ಸ್ಥಿತಿಯಲ್ಲಿದ್ದ ಮಹಿಳೆಗೆ ಎಚ್ಚರದಿಂದಿರಲು ನಿರಂತರವಾಗಿ ಕಪಾಳಮೋಕ್ಷ ಮಾಡಿದ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ತನಿಖೆ ನಡೆಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಆದೇಶಿಸಿದ್ದಾರೆ.

ನಗರದ ದುಬಗ್ಗಾ ಪ್ರದೇಶದ ನಿವಾಸಿಯಾದ ಗರ್ಭಿಣಿ ಮಹಿಳೆ ಆರೋಗ್ಯಾಧಿಕಾರಿಗಳಿಗೆ ದೂರು ನೀಡಿ, ಪ್ರಸವದ ಸಮಯದಲ್ಲಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ನಿರಂತರವಾಗಿ ಕಪಾಳ ಮೋಕ್ಷ ಮಾಡಿದ್ದಾರೆ. ಇದರಿಂದ ಕೆನ್ನೆ ಬಾತುಕೊಂಡಿದೆ. ಮಗುವಿಗೆ ಜನ್ಮ ನೀಡಿ ಆಪರೇಶನ್ ಧಿಯೇಟರ್‌ನಿಂದ ಹೊರಬಂದಾಗ ಮಾತನಾಡಲು ಸಾಧ್ಯವಾಗಿಲ್ಲ. ಇಂತಹ ಕೃತ್ಯ ಎಸಗಿದ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.  

ಪ್ರಸವದ ಸಂದರ್ಭದಲ್ಲಿ ಎಚ್ಚರವಾಗಿರಲು ಕಪಾಳಮೋಕ್ಷ ಮಾಡಿದ್ದಾಗ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗಳು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬದ ಸದಸ್ಯರು ಒತ್ತಾಯಿಸಿದ್ದಾರೆ.

ಘಟನೆಯ ಕುರಿತಂತೆ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಎರಡು ದಿನಗಳೊಳಗಾಗಿ ವರದಿಯನ್ನು ನೀಡುವಂತೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ