ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧೆಡೆ ಸೇನಾ ಪಡೆ ಕಾರ್ಯಾಚರಣೆ ನಡೆಸಿತ್ತು. ಉರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಎನ್ ಕೌಂಟರ್ ನಡೆಸಿ 5-6 ಉಗ್ರರನ್ನು ಹತ್ಯೆ ಮಾಡಿತ್ತು. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸಿದ್ದ ಸೇನಾ ಪಡೆ ಉಗ್ರರು ಬಳಸಿದ್ದ ಔಷಧಿಗಳು, ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿತ್ತು.