ಕಾನ್ಪುರ : ತನ್ನ ಒಳ ಉಡುಪನ್ನು ಕೆಲಸಗಾರನೊಬ್ಬ ಕದ್ದು ಧರಿಸಿದ್ದಾನೆ ಎಂದು ಸಹದ್ಯೋಗಿಯೊಬ್ಬ ಆತನನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾರ್ಖಾನೆಯೊಂದರಲ್ಲಿ ನಡೆದಿದೆ.
ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರು ಆರೋಪಿಗಳು ಒಂದೇ ರೂಂನಲ್ಲಿ ವಾಸಿಸುತ್ತಿದ್ದರು. ಕೊಲೆಯಾದ ವ್ಯಕ್ತಿ ಆರೋಪಿಯ ಒಳ ಉಡುಪನ್ನು ಕದ್ದು ಧರಿಸಿ ಕುಚೇಷ್ಟೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಆರೋಪಿ ವಾಗ್ವಾದಕ್ಕಿಳಿದು ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಇರಿತಕ್ಕೊಳಗಾದ ವ್ಯಕ್ತಿ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.